Publish Date: Tue, 03 May 2022 (13:21 IST)
Updated Date: Tue, 03 May 2022 (13:19 IST)
ಕೋಲ್ಕತ್ತಾ : ಪ್ರೀತಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬರ್ಹಾಂಪೋರ್ನಲ್ಲಿ ನಡೆದಿದೆ.
ಆರೋಪಿಯನ್ನು ಸುಶಾಂತ್ ಚೌಧರ್ಯ ಎಂದು ಗುರುತಿಸಲಾಗಿದ್ದು, ಆರೋಪಿ ಹಾಗೂ ಸಂತ್ರಸ್ತೆ ಬಹಳ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಆದರೆ ನಂತರ ಇಬ್ಬರ ನಡುವೆ ಜಗಳ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಚೌಧರಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಮುರ್ಷಿದಾಬಾದ್ ಪೊಲೀಸರು ಆತನನ್ನು ಹಿಡಿಯಲು ಚೆಕ್ಪೋಸ್ಟ್ ಪೊಲೀಸ್ ಠಾಣೆಗಳಿಗೆ ಎಚ್ಚರಿಕೆ ನೀಡಿದರು.