Webdunia - Bharat's app for daily news and videos

Install App

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Sampriya
ಬುಧವಾರ, 30 ಏಪ್ರಿಲ್ 2025 (20:28 IST)
ನವದೆಹಲಿ: ಪಹಲ್ಗಾಮ್‌ನಲ್ಲಿ 26ಮಂದಿ ಮುಗ್ದ ಪ್ರವಾಸಿಗರ ಸಾವಿಗೆ ಕಾರಣರಾದ ಉಗ್ರರ ದಾಳಿಗೆ ಭಾರತ ತಿರುಗೇಟು ನೀಡಲು ಈಗಾಗಲೇ ಶುರುಮಾಡಿದೆ. ಇದೀಗ ಮತ್ತೊಂದು ಪ್ರಮುಖ ಹೆಜ್ಜೆಯಾಗಿ ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಾರ, ಪಾಕಿಸ್ತಾನದಲ್ಲಿ ನೋಂದಾಯಿಸಲಾದ ಮತ್ತು ಪಾಕಿಸ್ತಾನಿ ಏರ್‌ಲೈನ್‌ಗಳು ನಿರ್ವಹಿಸುವ ಎಲ್ಲಾ ವಿಮಾನಗಳಿಗೆ ಭಾರತವು ತನ್ನ ವಾಯುಪ್ರದೇಶವನ್ನು ಮುಚ್ಚಿದೆ.‌‌‌

ಏಪ್ರಿಲ್ 30 ರಿಂದ ಮೇ 23 ರವರೆಗೆ (ಅಂದಾಜು ಅವಧಿ) ಮಿಲಿಟರಿ ವಿಮಾನಗಳು ಸೇರಿದಂತೆ ಎಲ್ಲಾ ಪಾಕಿಸ್ತಾನಿ-ನೋಂದಾಯಿತ, ಕಾರ್ಯಾಚರಣೆ ಅಥವಾ ಗುತ್ತಿಗೆ ಪಡೆದ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿರುವುದನ್ನು ಭಾರತ ಬುಧವಾರ ಏರ್‌ಮೆನ್‌ಗಳಿಗೆ ನೋಟಿಸ್ ನೀಡಿದೆ.

ಭಾರತ ಮತ್ತು ಪಾಕಿಸ್ತಾನ ಎರಡೂ ಈಗ ಪರಸ್ಪರರ ವಿಮಾನಯಾನ ಸಂಸ್ಥೆಗಳನ್ನು ತಮ್ಮ ವಾಯುಪ್ರದೇಶವನ್ನು ಬಳಸದಂತೆ ನಿರ್ಬಂಧಿಸಿವೆ, ಏಕೆಂದರೆ ನೆರೆಯ ದೇಶವು ಆರು ದಿನಗಳ ಹಿಂದೆ ಈ ಕ್ರಮವನ್ನು ಈಗಾಗಲೇ ಘೋಷಿಸಿತ್ತು.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಹೆಚ್ಚುತ್ತಿದ್ದು, ಭಾರತೀಯ ಸೇನೆ ಸಮರ್ಥವಾಗಿ ಪ್ರತ್ಯುತ್ತರ ನೀಡಿರುವುದು ಗಮನಾರ್ಹ.

ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ ಮತ್ತು ಕ್ರೂರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ಸರ್ಕಾರ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಮುಂದಿನ ಸುದ್ದಿ
Show comments