ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ವಿವರಿಸಿದರು.
ಪಹಲ್ಗಾಮ್ ದಾಳಿ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಗುರುವಾರ ಸಂಜೆ 6 ಗಂಟೆಗೆ ಸಂಸತ್ತಿನಲ್ಲಿ ಸಭೆ ನಡೆಯಲಿದೆ. ಮೂಲಗಳ ಪ್ರಕಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಏತನ್ಮಧ್ಯೆ, ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್‌ನ ಅಧ್ಯಕ್ಷ ಸೈಯದ್ ನಾಸೆರುದ್ದೀನ್ ಚಿಶ್ತಿ ಅವರು ಪಹಲ್ಗಾಮ್‌ನಲ್ಲಿ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ, ಇಂತಹ ದಾಳಿಗಳಿಗೆ ಇಸ್ಲಾಂನಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಹೇಳಿದ್ದಾರೆ.
ಎಎನ್‌ಐ ಜೊತೆ ಮಾತನಾಡಿದ ಚಿಶ್ತಿ, "ಪಾಕಿಸ್ತಾನ ತನ್ನನ್ನು ಇಸ್ಲಾಮಿಕ್ ದೇಶ ಎಂದು ಕರೆದುಕೊಳ್ಳುತ್ತದೆ, ಆದರೆ ಮತ್ತೊಂದು ನೆರೆಹೊರೆಯವರ ಬಗ್ಗೆ ನೆರೆಹೊರೆಯವರ ಜವಾಬ್ದಾರಿ ಏನು ಎಂದು ಪಾಕಿಸ್ತಾನ ತಿಳಿದಿರಬೇಕು... ಇಂತಹ ದಾಳಿಗಳಿಗೆ ಇಸ್ಲಾಂನಲ್ಲಿ ಸ್ಥಾನವಿಲ್ಲ ಎಂದಿದ್ದಾರೆ.