ಬೆಂಗಳೂರು: ಭಾರತದ ಬಗ್ಗೆ "ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು" ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬಿಸಿ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಮೇಲೂ ಪರಿಣಾಮ ಬೀರಿದೆ.
ಶೋಯೆಬ್ ಅಖ್ತರ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಸರ್ಕಾರ ನೀಡಿದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಆದರೆ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸರ್ಕಾರದ ಆದೇಶದಿಂದಾಗಿ ಈ ವಿಷಯವು ಪ್ರಸ್ತುತ ಈ ದೇಶದಲ್ಲಿ ಲಭ್ಯವಿಲ್ಲ ಎಂದು ಸಂದೇಶವು ಹೇಳುತ್ತದೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಬಳಿಕ ಭಾರತ ವಾಘಾ ಹಾಗೂ ಅಟ್ಟಾರಿ ಬಾರ್ಡರ್ ಅನ್ನು ಬಂದ್ ಮಾಡುವ ಮೂಲಕ ಪ್ರತ್ಯುತ್ತರವನ್ನು ನೀಡಲು ಶುರು ಮಾಡಿದೆ.
ಇದೀಗ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದುರಂತ ಪಹಲ್ಗಾಮ್ ಭಯೋತ್ಪಾದಕ ಘಟನೆಯ ಹಿನ್ನೆಲೆಯಲ್ಲಿ ಭಾರತ, ಅದರ ಸೇನೆ ಮತ್ತು ಭದ್ರತಾ ಏಜೆನ್ಸಿಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ, ಸುಳ್ಳು ಮತ್ತು ದಾರಿತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುವ ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತ ಸರ್ಕಾರ ನಿಷೇಧಿಸಿದೆ