ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಕರ್ನಾಟಕದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್‌ಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.
ಇಂದು ಬೆಳಿಗ್ಗೆ ಕಾಶ್ಮೀರದಿಂದ ಕರ್ನಾಟಕಕ್ಕೆ ಮೃತದೇಹವನ್ನು ವಿಶೇಷ ವಿಮಾನದ ಮೂಲಕ ಕರೆತರಲಾಯಿತು.
ಮೃತ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಮತ್ತೋರ್ವ ಸಂತ್ರಸ್ತ ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು.
ಬಳಿಕ ಭರತ್ ಭೂಷಣ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಇನ್ನಿತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೃತ ಮಂಜುನಾಥ್ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆದರೆ, ಭರತ್ ಭೂಷಣ್ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.