ಜಮ್ಮು ಕಾಶ್ಮಿರದಲ್ಲಿ ಭಾರತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎನ್ನುವ ಪಾಕಿಸ್ತಾನದ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಕಿರೆನ್ ರಿಜಿಜು, ಪಾಕಿಸ್ತಾನ ಕಾಶ್ಮಿರದ ಬಗ್ಗೆ ಚಿಂತೆ ಮಾಡುವುದಕ್ಕಿಂತ ಪಾಕ್ ಆಕ್ರಮಿತ ಕಾಶ್ಮಿರದ ಬಗ್ಗೆ ಚಿಂತನೆ ನಡೆಸಿದರೆ ಸೂಕ್ತ ಎಂದು ತಿರುಗೇಟು ನೀಡಿದ್ದಾರೆ.
ಉಗ್ರ ಬುರ್ಹಾನ್‌ನನ್ನು ಸೇನಾಪಡೆಗಳು ಗುಂಡಿಟ್ಟು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ, ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಸೇರಿದಂತೆ ಇತರ ಮುಖಂಡರು ಕಾಶ್ಮಿರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ವಾಗ್ದಾಳಿ ಆರಂಭಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಬಗ್ಗೆ ಪಾಕಿಸ್ತಾನ ಕಳವಳ ವ್ಯಕ್ತಪಡಿಸಬೇಕೇ ಹೊರತು ಕಾಶ್ಮಿರದ ಬಗ್ಗೆಯಲ್ಲ. ಕಾಶ್ಮಿರ ಭಾರತದ ಅಂತರಿಕ ವಿಷಯವಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು ಕಿಡಿಕಾರಿದ್ದಾರೆ.
ಹಿಜ್ಬುಲ್ ಮುಜಾಹಿದಿನ್ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯ ನಂತರ ಪಾಕಿಸ್ತಾನ, ಕಾಶ್ಮಿರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸುತ್ತಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.