Select Your Language

Notifications

webdunia
webdunia
webdunia
webdunia

ಪಾಕ್ ಪರ ಘೋಷಣೆ: ಆರೋಪಿಗಳ ಬಂಧನ

ಪಾಕ್ ಪರ ಘೋಷಣೆ: ಆರೋಪಿಗಳ ಬಂಧನ
ಗಂಗಾವತಿ , ಶನಿವಾರ, 5 ನವೆಂಬರ್ 2016 (16:43 IST)
ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಏಕರೂಪ ನಾಗರಿಕ ಸಂಹಿತೆ ವಿರೋಧಿಸಿ ನಗರದಲ್ಲಿ ಇತ್ತೀಚಿಗೆ ಮುಸ್ಲಿಂ ಸಮುದಾಯದವರು ಕೈಗೊಂಡ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಐವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
 
ಬಂಧಿತರನ್ನು ಐಎಂಐ ಪಕ್ಷದ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಸಾದಿಕ್ ಅಲಿ, ತಾಲ್ಲೂಕು ಘಟಕದ ಅಧ್ಯಕ್ಷ ಮಹಮ್ಮದ್ ಸೈಯ್ಯದ್ ಮತ್ತು ವಿವಿಧ ಸಂಘಟನೆಗಳಿಗೆ ಸೇರಿದ ಮೊಹಮ್ಮದ್ ಸಾದಿಕ್, ಷಾಹಿದ್ ಮತ್ತು ಮೆಹಬೂಬ್ ಎಂದು ಗುರುತಿಸಲಾಗಿದೆ.
 
ಅವರನ್ನು ವಿಚಾರಣೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ತ್ರಿವಳಿ ತಲಾಖ್ ಮತ್ತು ಏಕರೂಪ ನಾಗರಿಕ ಸಂಹಿತೆ ವಿರೋಧಿಸಿ ಗಂಗಾವತಿಯಲ್ಲಿ  ಮುಸ್ಲಿಂ ಸಮುದಾಯ ಕೈಗೊಂಡಿದ್ದ ಮೆರವಣಿಗೆಯಲ್ಲಿ ಕೆಲ ಯುವಕರು ಪಾಕ್ ಪರ ಘೋಷಣೆ ಕೂಗಿದ್ದರು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 
 
ಇದಕ್ಕೆ ವಿಡಿಯೋ ದಾಖಲೆಯನ್ನು ಸಹ ಒದಗಿಸಲಾಗಿದೆ. ಆದರೂ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಕಳೆದವಾರ ಹಿಂದೂ ಜಾಗರಣ ವೇದಿಕೆ ಕಳೆದ ವಾರ ಪ್ರತಿಭಟನೆಯನ್ನು ಕೂಡ ಕೈಗೊಂಡಿತ್ತು.
 
'ಪಾಕ್ ಜಿಂದಾಬಾದ್' ಘೋಷಣೆ ಕೂಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಕೋಮುಗಲಭೆ ಸೃಷ್ಟಿಸಲು ಶೋಭಾ ಕರಂದ್ಲಾಜೆ ಆರೋಪ: ದಿನೇಶ್ ಗುಂಡೂರಾವ್