ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಬಣದ ನಾಯಕ ಯಡಪ್ಪಾಡಿ ಪಳನಿಸ್ವಾಮಿ ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
12 ಶಾಸಕರೊಂದಿಗೆ ರಾಜಭವನಕ್ಕೆ ಆಗಮಿಸಿದ ಪಳನಿಸ್ವಾಮಿ, ಉಸ್ತುವಾರಿ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿ, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಪತ್ರ ಮತ್ತು ಶಾಸಕರುಗಳ ಬೆಂಬಲ ಪತ್ರವನ್ನು ನೀಡಿದ್ದಾರೆ ಎನ್ನಲಾಗಿದೆ.
ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಪಳನಿಸ್ವಾಮಿಯವರನ್ನು ಆಯ್ಕೆ ಮಾಡುವಲ್ಲಿ ಶಶಿಕಲಾ ಯಶಸ್ವಿಯಾಗಿದ್ದು, ತಮ್ಮ ಗೈರುಹಾಜರಿಯಲ್ಲಿ ಬಲಗೈ ಬಂಟನನ್ನು ನೇಮಿಸುವ ಇರಾದೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಶಶಿಕಲಾ ಬಣ ಮತ್ತು ಪನ್ನೀರ್ ಸೆಲ್ವಂ ಬಣದ ಮಧ್ಯದ ತಿಕ್ಕಾಟ ತೀವ್ರಗೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.