Select Your Language

Notifications

webdunia
webdunia
webdunia
webdunia

ಪಣಜಿ ವಿಧಾನಸಭಾ ಉಪಚುನಾವಣೆ; ಪರಿಕ್ಕರ್ ಪುತ್ರನ ಕೈತಪ್ಪಿದ ಬಿಜೆಪಿ ಟಕೆಟ್

ಪಣಜಿ ವಿಧಾನಸಭಾ ಉಪಚುನಾವಣೆ; ಪರಿಕ್ಕರ್ ಪುತ್ರನ ಕೈತಪ್ಪಿದ ಬಿಜೆಪಿ ಟಕೆಟ್
ಪಣಜಿ , ಸೋಮವಾರ, 29 ಏಪ್ರಿಲ್ 2019 (10:54 IST)
ಪಣಜಿ : ಬಿಜೆಪಿ ಗೋವಾ ರಾಜ್ಯದ ಪಣಜಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದ್ದು, ಆದರೆ ಇದರಲ್ಲಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ನೀಡಲಿಲ್ಲ ಎಂಬ ವಿಚಾರ ತಿಳಿದುಬಂದಿದೆ.

ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 19ರಂದು ನಡೆಯಲಿದೆ. ಹೀಗಾಗಿ ಬಿಜೆಪಿಯು ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ನೀಡುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅಂತಿಮವಾಗಿ ಸಿದ್ಧಾರ್ಥ್ ಕುಂಕಲೇನಕರ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.

 

ಸಿದ್ಧಾರ್ಥ್ ಕುಂಕಲೇನಕರ್ ಅವರು ಈ ಹಿಂದೆ ಎರಡು ಬಾರಿ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಮನೋಹರ್ ಪರಿಕ್ಕರ್ ಅವರು ಗೋವಾ ರಾಜಕಾರಣಕ್ಕೆ ಮರಳಲು ನಿರ್ಧರಿಸಿದ ಹಿನ್ನಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪರಿಕ್ಕರ್ ಅವರ ಸ್ಪರ್ಧೆಗೆ ಸಹಕರಿಸಿದ್ದರು. ಈ ಕಾರಣಕ್ಕಾಗಿಯೇ ಇದೀಗ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

 


Share this Story:

Follow Webdunia kannada

ಮುಂದಿನ ಸುದ್ದಿ

ಸಾಲಮನ್ನಾ ವಿಚಾರದ ಬಗ್ಗೆ ಹೇಳಿಕೆ; ದರ್ಶನ್ ವಿರುದ್ಧ ಕಿಡಿಕಾರಿದ ರೈತ ಮುಖಂಡ