Select Your Language

Notifications

webdunia
webdunia
webdunia
webdunia

ವಿವಾಹವಾಗುವುದಾಗಿ ನಂಬಿಸಿ ಹಲವಾರು ಬಾರಿ ಅತ್ಯಾಚಾರವೆಸಗಿದ ಅಧಿಕಾರಿ

ವಿವಾಹವಾಗುವುದಾಗಿ ನಂಬಿಸಿ ಹಲವಾರು ಬಾರಿ ಅತ್ಯಾಚಾರವೆಸಗಿದ ಅಧಿಕಾರಿ
ತಿಕಮ್‌ಗಢ್ , ಗುರುವಾರ, 26 ನವೆಂಬರ್ 2015 (21:27 IST)
ಯುವತಿಯೊಬ್ಬಳಿಗೆ ವಿವಾಹದ ಭರವಸೆ ನೀಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
 
ಚೋಮೋಖಾಸ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೋಮಲ್ ಯಾದವ್ ಎನ್ನುವ ವ್ಯಕ್ತಿ ವಿವಾಹವಾಗುವುದಾಗಿ ನಂಬಿಸಿ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ಪ್ರಥ್ವಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ ಎಂದು ಠಾಣೆಯ ಅಧಿಕಾರಿ ಲಕ್ಷ್ಮಣ್ ಪ್ರಸಾದ್ ಯಾದವ್ ತಿಳಿಸಿದ್ದಾರೆ.  
 
ಏತನ್ಮಧ್ಯೆ, ಆರೋಪಿ ಕೋಮಲ್ ಮತ್ತೊಬ್ಬ ಯುವತಿಯೊಂದಿಗೆ ವಿವಾಹವಾಗಿದ್ದರಿಂದ ಅತ್ಯಾಚಾರಕ್ಕೊಳಗಾದ ಯುವತಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
 
ಆರೋಪಿ ಕೋಮಲ್ ಯಾದವ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada