Select Your Language

Notifications

webdunia
webdunia
webdunia
webdunia

ಅತ್ಯಾಚಾರದ ವೀಡಿಯೋದಿಂದ ಹಣ ಗಳಿಸುತ್ತೇನೆ ಎಂದ ಪಾಪಿ!

ಅತ್ಯಾಚಾರದ ವೀಡಿಯೋದಿಂದ ಹಣ ಗಳಿಸುತ್ತೇನೆ ಎಂದ ಪಾಪಿ!
ಜೈಪುರ , ಸೋಮವಾರ, 2 ಮೇ 2022 (10:35 IST)
ಜೈಪುರ : ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಸಂಬಂಧಿಕರಿಂದಲೇ ಪತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿಸಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ.

ಅಲ್ಲದೇ ಗ್ಯಾಂಗ್ ರೇಪ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಯೂಟ್ಯೂಬ್ನಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಬರಬೇಕಾಗಿರುವ ವರದಕ್ಷಿಣೆ ಹಣವನ್ನು ಪಡೆಯುತ್ತೇನೆ ಎಂದು ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ.

ಇದೀಗ ಸಂತ್ರಸ್ತೆ ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ.   ಭರತ್ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು, ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರು ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಿಸಿದ್ದಾಳೆ.

ಅಲ್ಲದೇ ಯೂಟ್ಯೂಬ್ಗೆ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

2019ರಲ್ಲಿ ದಂಪತಿ ಹರಿಯಾಣದಲ್ಲಿ ಮದುವೆಯಾಗಿದ್ದು, ಅಂದಿನಿಂದ ಮಹಿಳೆಗೆ ಅತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಕಾರಣದಿಂದ ಆಕೆ ತನ್ನ ಪೋಷಕರ ಮನೆಗೆ ಮರಳಿದ್ದಳು. ಆದರೆ ಪತಿ ಮತ್ತೆ ಆಕೆಯನ್ನು ಮನೆಗೆ ಕರೆದುಕೊಂಡು ಬಂದಿದ್ದನು.

ನಂತರ ಪತಿ ತನ್ನ ಇಬ್ಬರು ಸಂಬಂಧಿಕರನ್ನು ಮನೆಗೆ ಕರೆದುಕೊಂಡು ಬಂದು ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸುವಂತೆ ಸಂಬಂಧಿಕರಿಗೆ ಹೇಳಿ, ಘಟನೆಯನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಮತ್ತು ನಿಮ್ಮ ಕುಟುಂಬಸ್ಥರು ನನಗೆ ವರದಕ್ಷಿಣೆ ನೀಡಲು ಸಾಧ್ಯವಾಗಲಿಲ್ಲ.

ಹಾಗಾಗಿ ನಾನು ಈ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಹಾಕುವ ಮೂಲಕ ಅದೇ ಮೊತ್ತವನ್ನು ಗಳಿಸುತ್ತೇನೆ ಎಂದು ಹೇಳಿ ಅಶ್ಲೀಲ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.


Share this Story:

Follow Webdunia kannada

ಮುಂದಿನ ಸುದ್ದಿ

ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಮಹಾರಾಷ್ಟ್ರದ ಶಕ್ತಿಯನ್ನು ತೋರಿಸುತ್ತೇವೆ : ರಾಜ್ ಠಾಕ್ರೆ