ನವದೆಹಲಿ : ಈ ಬಾರಿ ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
									
			
			 
 			
 
 			
					
			        							
								
																	ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ. ಕೇಂದ್ರ ಬಜೆಟ್ 2023-24 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.
									
										
								
																	ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 10 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.
									
											
							                     
							
							
			        							
								
																	ಬಜೆಟ್ ಅಧಿವೇಶನದ ಮೊದಲ ದಿನ ಸಂಸತ್ತಿನ ಉಭಯ ಸದನದಲ್ಲಿ ಆರ್ಥಿಕ ಸಮೀಕ್ಷೆಯನ್ನೂ ಮಂಡಿಸುವ ಸಾಧ್ಯತೆಯಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿ, ಅಧಿವೇಶನವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.