Publish Date: Sun, 07 Oct 2018 (19:28 IST)
Updated Date: Sun, 07 Oct 2018 (19:30 IST)
ರಾಜ್ಯದ ಉಪಚುನಾವಣೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರಲ್ಲಿ ಜೆಡಿಎಸ್ – ಕಾಂಗ್ರೆಸ್- ಬಿಜೆಪಿ ಮುಳುಗಿದ್ದು, ಆಯಾ ಪಕ್ಷಗಳ ನಾಯಕರಿಗೆ ಗೆಲ್ಲುವ ಕುದುರೆ ಕಣಕ್ಕೆ ಇಳಿಸುವುದೇ ಚಿಂತೆಯಾಗಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುತ್ತಿವೆ. ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಳ್ಳಾರಿ ಮತ್ತು ಶಿವಮೊಗ್ಗ ಕ್ಷೇತ್ರಗಳು ಕಾಂಗ್ರೆಸ್ ಅಭ್ಯರ್ಥಿಗಳ ಪಾಲಾಗಲಿವೆ.
ಇನ್ನು ರಾಮನಗರ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಹಾಗೂ ಜಮಖಂಡಿ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ.
ಚುನಾವಣೆಗೆ ದಿನಗಣನೆ ಆರಂಭಗೊಂಡ ಕಾರಣ ಮೂರು ಪಕ್ಷಗಳು ಅಭ್ಯರ್ಥಿ ಆಯ್ಕೆಯಲ್ಲಿ ಮುಳುಗಿವೆ.