Select Your Language

Notifications

webdunia
webdunia
webdunia
webdunia

ಆಂಧ್ರದ ಡಿಸಿಎಂ ಆಗಿ ಪವನ್‌ ಕಲ್ಯಾಣ್‌ ನೇಮಕ

Pawan Kalyan

sampriya

ಅಮರಾವತಿ , ಶುಕ್ರವಾರ, 14 ಜೂನ್ 2024 (16:33 IST)
Photo By X
ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ನೇಮಕಗೊಂಡಿದ್ದಾರೆ. ಅದಲ್ಲದೆ ಅವರಿಗೆ ಪಂಚಾಯತ್‌ ರಾಜ್‌, ಗ್ರಾಮೀಣಾಭಿವೃದ್ಧಿ, ಪರಿಸರ ಮತು ಅರಣ್ಯ ಖಾತೆಯನ್ನು ನೀಡಲಾಗಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದರು.

ಇನ್ನೂ ಚಂದ್ರಬಾಬು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ, ಜೆಪಿ ನಡ್ಡಾ, ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂದೆ ಅವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.  ಎನ್‌. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಎರಡು ಬಾರಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜ್ಯ ವಿಭಜನೆಯಾದ ನಂತರ ಈಗ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರೇಣುಕಾಸ್ವಾಮಿ ಪ್ರಕರಣ, ತನಿಖೆ ಅಂತಿಮ ಹಂತದಲ್ಲಿರುವಾಗ ತನಿಖಾಧಿಕಾರಿ ದಿಢೀರ್‌ ವರ್ಗಾವಣೆ