ಬೆಂಗಳೂರು: ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಸಿಲುಕಿದ ಕನ್ನಡಿಗರ ಮೃತದೇಹ ಮತ್ತು ಇಲ್ಲಿ ಸಿಲುಕಿಕೊಂಡಿರುವ ಸುಮಾರು 40 ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಸಂಸದ ತೇಜಸ್ವಿ ಸೂರ್ಯ ಮತ್ತು ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಕನ್ನಡಿಗರ ರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಈಗಾಗಲೇ ಉಗ್ರರ ದಾಳಿಗೆ ಮೃತಪಟ್ಟ ಮಂಜುನಾಥ್ ಪತ್ನಿ ಪಲ್ಲವಿ ಮತ್ತು ಪುತ್ರನನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಸಚಿವ ಸಂತೋಷ್ ಲಾಡ್ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಕನ್ನಡಿಗರ ರಕ್ಷಣೆಗೆ ಸಹಾಯ ಕೋರಿದ್ದಾರೆ.
ಇದೀಗ ಎಲ್ಲರನ್ನೂ ವಿಶೇಷ ವಿಮಾನದಲ್ಲಿ ಕರೆತರುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕನ್ನಡಿಗರನ್ನು ನಾವೇ ಜೊತೆಗೆ ವಿಶೇಷ ವಿಮಾನದಲ್ಲಿ ಕರೆತರಲಿದ್ದೇವೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದೇವೆ.
ಪೆಹಲ್ಗಾಮ್ ನಲ್ಲಿ ಪ್ರವಾಸಕ್ಕೆಂದು ತೆರಳಿ ಈಗ ಉಗ್ರರ ದಾಳಿಯಿಂದಾಗಿ ಅತಂತ್ರರಾಗಿರುವ ಸುಮಾರು 40 ಕನ್ನಡಿಗರಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ಬದ್ಧ. ನಾವು ಎಲ್ಲಾ ರೀತಿಯ ನೆರವು ನೀಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.