Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಪತ್ರಕರ್ತರಿಗೆ ನಿವೃತ್ತಿ ಯೋಜನೆ!

Webdunia
ಸೋಮವಾರ, 20 ಜುಲೈ 2015 (17:33 IST)
ಕಾರ್ಯನಿರತ ಪತ್ರಕರ್ತರಿಗೆ ನಿವೃತ್ತಿ ಯೋಜನೆಯನ್ನು ತರುವುದಕ್ಕೆ ಮಹಾರಾಷ್ಟ್ರ ಸರ್ಕಾರ ತಯಾರಿ ನಡೆಸಿದ್ದು, ಇದನ್ನು ಸದ್ಯದಲ್ಲಿಯೇ ಅಂತಿಮಗೊಳಿಸಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. 
 
ರಾಜಪೇಠ್ ಪೊಲೀಸ್ ಠಾಣೆಯ ಬಳಿ ಪತ್ರಕರ್ತರ ಭವನವನ್ನು ಉದ್ಘಾಟಿಸಿದ ಬಳಿಕ ಸಂತ ಜ್ಞಾನೇಶ್ವರ ಸಾಂಸ್ಕೃತಿಕ ಭವನದಲ್ಲಿ ನೆರೆಯ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಫಡ್ನವೀಸ್ ಪತ್ರಕರ್ತರಿಗೆ ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸಹಾಯ ಕಲ್ಪಿಸುವುದಾಗಿ ಭರವಸೆ ನೀಡಿದರಲ್ಲದೆ ಕಾರ್ಯನಿರತ ಪತ್ರಕರ್ತರ ಯೂನಿಯನ್, ಅಮರಾವತಿ  (AUWJ)ಗೆ  10 ಲಕ್ಷ ರೂಪಾಯಿಯನ್ನು ಘೋಷಿಸಿದರು. 
 
ಮಹಾರಾಷ್ಟ್ರ ಸರಕಾರ ಕಾರ್ಯನಿರತ ಪತ್ರಕರ್ತರ ರಕ್ಷಣೆಗೆ ಸಂಬಂಧಿಸಿದ ಮಸೂದೆಯನ್ನು ಜಾರಿಗೆ ತರಲು ಗಂಭೀರವಾಗಿ  ಆಲೋಚಿಸುತ್ತಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ವಿವಿಧ ವಲಯಗಳಿಂದ ಸಲಹೆಗಳನ್ನು ಆಹ್ವಾನಿಸುತ್ತಿದ್ದೇವೆ ಎಂದು ತಿಳಿಸಿದರು.
 
ಆದರೆ ಪತ್ರಿಕೋದ್ಯಮದ ಸೋಗಿನಲ್ಲಿ ಜನರಿಗೆ ಬೆದರಿಕೆ ಒಡ್ಡಲು ಈ ಮಸೂದೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶವಿಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments