Select Your Language

Notifications

webdunia
webdunia
webdunia
webdunia

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

Cloudburst in Jammu, rescue operations underway, Meteorological Department

Sampriya

ಜಮ್ಮು , ಭಾನುವಾರ, 20 ಏಪ್ರಿಲ್ 2025 (12:47 IST)
Photo Courtesy X
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಂಬನ್‌ ಜಿಲ್ಲೆಯಲ್ಲಿ ಮೇಘ ಸ್ಫೋಟ ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಸೇರಿದಂತೆ ಹಲವೆಡೆ ಭೂಕುಸಿತ, ಮಣ್ಣು ಕುಸಿತ ಸಂಭವಿಸಿದೆ. ಹೀಗಾಗಿ ಹೆದ್ದಾರಿಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.

ರಂಬನ್‌ನ ಸೆರಿ ಬಗ್ನಾ ಗ್ರಾಮದಲ್ಲಿ ಮೇಘ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ನೂರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 15ಕ್ಕೂ ಮನೆಗಳು ಸಂಪೂರ್ಣವಾಗಿ ನಾಶವಾಗಿದೆ, ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

 

Share this Story:

Follow Webdunia kannada

ಮುಂದಿನ ಸುದ್ದಿ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ