ನವದೆಹಲಿ : ರಿಕ್ವಿಸಿಷನ್ ಸ್ಲಿಪ್ ಮತ್ತು ಐಡಿ ಪುರಾವೆಗಳಿಲ್ಲದೆ 2,000 ರೂ. ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಅಧಿಸೂಚನೆಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ರಿಕ್ವಿಸಿಷನ್ ಸ್ಲಿಪ್ ಮತ್ತು ಐಡಿ ಪುರಾವೆಯಿಲ್ಲದೇ ಮುಖ್ಯನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಮತ್ತು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ (ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಈ ಕುರಿತು ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಯಾವುದೇ ರಿಕ್ವಿಸಿಷನ್ ಸ್ಲಿಪ್ ಮತ್ತು ಗುರುತಿನ ಪುರಾವೆಗಳನ್ನು ಪಡೆಯದೆಯೇ ಆರ್ಬಿಐ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಿದೆ. ಇದು ಅನಿಯಂತ್ರಿತ ಎಂದು ಉಪಾಧ್ಯಾಯ ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದರು.
ಚಲಾವಣೆಯಲ್ಲಿರುವ 2,000 ರೂ. ನೋಟುಗಳ ಒಟ್ಟು ಮೌಲ್ಯ 6.73 ಲಕ್ಷ ಕೋಟಿಯಿಂದ 3.62 ಲಕ್ಷ ಕೋಟಿಗೆ ಇಳಿಕೆಯಾಗಿದೆ ಎಂದು ಆರ್ಬಿಐ ಒಪ್ಪಿಕೊಂಡಿದೆ. ದೊಡ್ಡ ಮೊತ್ತದ ಕರೆನ್ಸಿಗಳು ವ್ಯಕ್ತಿಯ ಲಾಕರ್ ತಲುಪಿದೆ. ಈ ದೊಡ್ಡ ಮೊತ್ತದ ಹಣವನ್ನು ಭಯೋತ್ಪಾದಕರು, ಪ್ರತ್ಯೇಕತಾವಾದಿಗಳು, ಮಾವೋವಾದಿಗಳು, ಡ್ರಗ್ ಸ್ಮಗ್ಲರ್ಗಳು, ಗಣಿ ಮಾಫಿಯಾಗಳು ಮತ್ತು ಭ್ರಷ್ಟರಿಂದ ಸಂಗ್ರಹಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.