ಮೋದಿಯಿಂದ ವಿಶ್ವದಲ್ಲಿಯೇ ಬೃಹತ್ ಪೂರ್ವ ಸಿದ್ದತೆಯಿಲ್ಲದ ಆರ್ಥಿಕ ಪ್ರಯೋಗ: ರಾಹುಲ್ ವಾಗ್ದಾಳಿ

Webdunia
ಬುಧವಾರ, 23 ನವೆಂಬರ್ 2016 (14:09 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವದಲ್ಲಿಯೇ ಬೃಹತ್ ಪೂರ್ವ ಸಿದ್ದತೆಯಿಲ್ಲದ ಆರ್ಥಿಕ ಪ್ರಯೋಗ ಮಾಡಿ ದೇಶವನ್ನು ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ಪ್ರಧಾನಿ ಮೋದಿಯ ನೋಟ್ ಬ್ಯಾನ್ ಬಹುದೊಡ್ಡ ಹಗರಣವಾಗಿದ್ದು, ಜೆಪಿಸಿ ತನಿಖೆಯಾಗಬೇಕು ಎಂದು ಎಲ್ಲಾ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಆದರೆ, ಮೋದಿ ಲೋಕಸಭೆಗೆ ಆಗಮಿಸುವ ಧೈರ್ಯ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ. 
 
ಇಂದು ಬೆಳಿಗ್ಗೆ ಸಂಸತ್ತಿನ ಆವರಣದಲ್ಲಿ ಪ್ರತಿಪಕ್ಷಗಳ ಸುಮಾರು 200 ಸಂಸದರು ಮಾನವ ಸರಪಳಿಯನ್ನು ನಿರ್ಮಿಸಿ ಸರಕಾರದ ವಿರುದ್ಧ ಪ್ರತಿಭಟನೆ ತೋರಿದ್ದಾರೆ. ಪ್ರಧಾನಿ ಮೋದಿ ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಮತ್ತು ನೋಟ್ ಬ್ಯಾನ್‌ ಮಾಹಿತಿಯನ್ನು ತಮ್ಮ ಉದ್ಯಮಪತಿಗಳಿಗೆ, ಬಿಜೆಪಿ ಮುಖಂಡರಿಗೆ ಯಾಕೆಸೋರಿಕೆ ಮಾಡಿದರು ಎನ್ನುವ ಬಗ್ಗೆ ಸಂಸತ್ತಿನಲ್ಲಿ ಉತ್ತರಿಸಲೇಬೇಕು ಎಂದು ಒತ್ತಾಯಿಸಿದರು.
 
ಮೋದಿ, ಹಣಕಾಸು ಸಚಿವ ಅರುಣ್ ಜೇಟ್ಲಿ, ಮುಖ್ಯ ಆರ್ಥಿಕ ಸಲಹೆಗಾರ ಸೇರಿದಂತೆ ಯಾರೊಬ್ಬರ ಸಲಹೆ ಕೂಡಾ ಪಡೆಯದೆ ವಿಶ್ವದಲ್ಲಿಯೇ ಬೃಹತ್ ಪೂರ್ವ ಸಿದ್ದತೆಯಿಲ್ಲದ ಆರ್ಥಿಕ ಪ್ರಯೋಗ ಮಾಡಿದ್ದಾರೆ ಎಂದು ಕಿಡಿಕಾರಿದರು.
 
ಪ್ರಧಾನಮಂತ್ರಿ ನೃತ್ಯ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲು ಸಮಯವಿರುತ್ತದೆ. 200 ಸಂಸದರು ಮೋದಿ ಸಂಸತ್ತಿಗೆ ಬಂದು ಹೇಳಿಕೆ ನೀಡಲಿ ಎಂದು ಒತ್ತಾಯಿಸಿದರೆ ಸಂಸತ್ತಿಗೆ ಬರಲು ಮೋದಿಗೆ ಸಮಯವಿಲ್ಲ. ಮೋದಿ ಸಂಸತ್ತಿಗೆ ಬರಲು ಯಾಕೆ ಹೆದರುತ್ತಿದ್ದಾರೆ ಎಂದು ಪ್ರಶ್ನಿಸಿದರು.
 
ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಟಿಎಂಸಿ, ಡಿಎಂಕೆ, ಸಿಪಿಎಲ್, ಸಿಪಿಐ(ಎಂ) ಪಕ್ಷಗಳಿಗೆ ಸೇರಿದ 200 ಸಂಸದರು ಸಂಸತ್ತಿನಲ್ಲಿರುವ ಗಾಂಧಿ ಪ್ರತಿಮೆ ಬಳಿ ನೋಟು ನಿಷೇಧ ವಿರೋಧಿಸಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments