Select Your Language

Notifications

webdunia
webdunia
webdunia
webdunia

ಮುಂಗಾರು ಅಧಿವೇಶನದಲ್ಲಿ ಜಿಎಸ್‌ಟಿ ಅಂಗೀಕಾರವಾಗುವ ವಿಶ್ವಾಸ: ಪ್ರಧಾನಿ ಮೋದಿ

ನರೇಂದ್ರ ಮೋದಿ
ನವದೆಹಲಿ , ಸೋಮವಾರ, 18 ಜುಲೈ 2016 (12:55 IST)
ಮುಂಗಾರು ಅಧಿವೇಶನದಲ್ಲಿ ಮಹತ್ವದ ನಿರ್ಧಾರಗಳ ಕುರಿತಂತೆ ಎಲ್ಲಾ ಪಕ್ಷಗಳು ಒಂದಾಗಿ ಒಮ್ಮತದಿಂದ ಕಾರ್ಯನಿರ್ವಹಿಸುತ್ತವೆ ಎನ್ನುವ ಆಶಾಭಾವನೆ ಹೊಂದಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
70ನೇ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳ ಮುಂಚೆ ಮುಂಗಾರು ಅಧಿವೇಶನ ಆರಂಭವಾಗಲಿರುವುದರಿಂದ, ಸಂಸತ್ತಿನಲ್ಲಿ ಮಹತ್ವದ ಮಸೂದೆಗಳಿಗೆ ಅಂಗೀಕಾರ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 
 
ಇಂದು ಮುಂಗಾರು ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಸಂಸತ್ತಿನ ಹೊರ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಕಳೆದ ಕೆಲ ದಿನಗಳಿಂದ ವಿಪಕ್ಷಗಳೊಂದಿಗೆ ಚರ್ಚೆ ನಡೆಸಿ ಸಹಮತಕ್ಕೆ ಬಂದಿದ್ದೇವೆ. ಆದ್ದರಿಂದ, ಅಧಿವೇಶನದಲ್ಲಿ ಉತ್ತಮ ನಿರ್ಧಾರಗಳನ್ನು ಕೈಗೊಂಡು ವೇಗವಾಗಿ ಅಭಿವೃದ್ಧಿಪಥದಲ್ಲಿ ಸಾಗಬೇಕಾಗಿದೆ ಎಂದರು.
 
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿರುವವರನ್ನು ಸ್ಮರಿಸಿದ ಮೋದಿ, ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಕಾರ್ಯನಿರ್ವಹಿಸಿ, 70 ವರ್ಷಗಳ ಸ್ವಾತಂತ್ರ್ಯದ ಅನುಭವಕ್ಕೆ ಹೊಸ ಮೆರಗು ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ಕೇಂದ್ರ ಸರಕಾರದ ಹಿರಿಯ ಸಚಿವರುಗಳು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಜಿಎಸ್‌ಟಿ ಮಸೂದೆಗೆ ಅಂಗೀಕಾರ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
 
ಏತನ್ಮಧ್ಯೆ, ಅರುಣಾಚಲ ಪ್ರದೇಶದಲ್ಲಿದ್ದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು, ಕಾಶ್ಮಿರ ಬಿಕ್ಕಟ್ಟು, ಎನ್‌‍ಎಸ್‌ಜಿ ಸದಸ್ಯತ್ವ ಪಡೆಯುವಲ್ಲಿ ವಿಫಲತೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರಿಂದ ಗೋಚಾತುರ್ಮಾಸ್ಯ