ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಲಿದ್ದಾರೆ. ಫಲಾನುಭವಿಗಳು ಇಂದೇ ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಬಹುದು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ ಒಂದು. ಅರ್ಹ ರೈತರ ಖಾತೆಗೆ ಮೂರು ಕಂತುಗಳಲ್ಲಾಗಿ ವರ್ಷಕ್ಕೆ 6,000 ರೂ. ಧನ ಸಹಾಯವನ್ನು ಮೋದಿ ಸರ್ಕಾರ ನೀಡುತ್ತಿದೆ.
ಇದೀಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತು ಬಿಡುಗಡೆಗೆ ಕೇಂದ್ರ ಸಜ್ಜಾಗಿದೆ. ಇಂದೇ ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ನಿಧಿಗಾಗಿ ರೈತರ ಖಾತೆಗೆ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಿದ್ದಾರೆ.
ಇಂದು ಬಿಹಾರದ ಭಾಗಲ್ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ ಅಲ್ಲಿಂದಲೇ 19 ನೇ ಕಂತು ಬಿಡುಗಡೆ ಮಾಡಲಿದ್ದಾರೆ ಎಂದು ಈಗಾಗಲೇ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂ. ಜಮೆ ಆಗುತ್ತದೆ. ಕಳೆದ ಅಕ್ಟೋಬರ್ ನಲ್ಲಿ 18 ನೇ ಕಂತಿನ ಹಣ ಜಮೆ ಆಗಿತ್ತು. ಇದೀಗ 19 ನೇ ಕಂತಿನ ಹಣ ಬಿಡುಗಡೆಯಾಗುತ್ತಿದೆ. ಫಲಾನುಭವಿಗಳು ಇಂದೇ ತಮ್ಮ ಬ್ಯಾಂಕ್ ಖಾತೆ ಚೆಕ್ ಮಾಡಿಕೊಳ್ಳಬಹುದು.