ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

Krishnaveni K
ಸೋಮವಾರ, 17 ನವೆಂಬರ್ 2025 (14:22 IST)
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಇಂದೇ ನಿಮ್ಮ ಬ್ಯಾಂಕ್ ಖಾತೆ ಎಲ್ಲವೂ ಸರಿಯಾಗಿದೆಯಾ ಎಂದು ಚೆಕ್ ಮಾಡಿಕೊಳ್ಳಿ.
 

ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ ಮೂರು ಕಂತುಗಳಂತೆ ರೈತರ ಖಾತೆಗೆ ತಲಾ 2,000 ರೂ.ಗಳಂತೆ 6,000 ರೂ. ಜಮೆ ಆಗುತ್ತದೆ. ಈಗಾಗಲೇ 20 ಕಂತಿನ ಹಣ ರೈತರ ಖಾತೆಗೆ ಬಂದು ಸೇರಿದೆ. ಇದೀಗ 21 ನೇ ಕಂತಿನ ಹಣ ಬಿಡುಗಡೆಗೆ ಸಮಯ ನಿಗದಿಯಾಗಿದೆ.

ನವಂಬರ್ 19 ಬುಧವಾರದಂದು 21 ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 10 ಕೋಟಿ ರೈತರ ಖಾತೆಗೆ ನೇರವಾಗಿ 2,000 ರೂ. ಹಣ ಸಂದಾಯವಾಗಲಿದೆ. ಕಳೆದ ಕಂತಿನ ಹಣ ಆಗಸ್ಟ್ ನಲ್ಲಿ ಬಿಡುಗಡೆಯಾಗಿತ್ತು.

ಪಿಎಂ ಕಿಸಾನ್ ವೆಬ್ ಸೈಟ್ ನಲ್ಲಿ  ಈ ಬಗ್ಗೆ ನಿಖರ ಮಾಹಿತಿ ನೀಡಲಾಗುತ್ತದೆ. ಫಲಾನುಭವಿಗಳ ಪಟ್ಟಿ ಇದರಲ್ಲಿ ನೀಡಲಾಗುವುದು. ನಿಮ್ಮ ಹೆಸರು ಇದರಲ್ಲಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬಹುದು. ಜೊತೆಗೆ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದೆಯಾ ಎಂದೂ ಚೆಕ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments