Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೊದಲು ಬೆಂಗಳೂರಿಗೆ

ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೊದಲು ಬೆಂಗಳೂರಿಗೆ
ಬೆಂಗಳೂರು , ಶನಿವಾರ, 21 ಅಕ್ಟೋಬರ್ 2017 (10:38 IST)
ಬೆಂಗಳೂರು: ಪ್ರಧಾನಿ ಮೋದಿ ಅಕ್ಟೋಬರ್ 29 ಕ್ಕೆ ದ.ಕ. ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೊದಲು ಕರ್ನಾಟಕದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

 
ಮೊದಲು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಆದಿಚುಂಚನಗಿರಿ ಮಠದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೀದರ್ ಗೆ ತೆರಳಲಿದ್ದು, ಅಲ್ಲಿ ಕುಲಬರಗಿ-ಬೀದರ್ ನಡುವಿನ 104 ಕಿ.ಮೀ. ಉದ್ದದ ರೈಲು ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. 

ಅದಾದ ಬಳಿಕ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಲಿದ್ದಾರೆ. ಇಲ್ಲಿಯೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಅಂತೂ ಮೋದಿ ಕರ್ನಾಟಕ ಭೇಟಿ ಸಂಬದರ್ಭ ಬಿಡುವಿಲ್ಲದ ವೇಳಾಪಟ್ಟಿ ನಿಗದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಸ್ಪತ್ರೆಗೆ ದಾಖಲು