ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ ನಡೆಸಿದ ಬಳಿಕ ಇಂದು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿತ್ತು. ಆದರೆ ಈ ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಮತ್ತೆ ಗೈರಾಗಿದ್ದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ವಿಪಕ್ಷಗಳ ಜೊತೆ ಸರ್ವಪಕ್ಷ ಸಭೆ ನಡೆಸಿತ್ತು. ಈ ಸಭೆಗೆ ಪ್ರಧಾನಿ ಮೋದಿ ಗೈರಾಗಿದ್ದರು. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪವೆತ್ತಿದ್ದರು.
ಇಂದು ಆಪರೇಷನ್ ಸಿಂದೂರ ಬಳಿಕ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲೂ ಪ್ರಧಾನಿ ಮೋದಿ ಭಾಗಿಯಾಗಿರಲಿಲ್ಲ. ಈ ಬಗ್ಗೆ ಇಂದೂ ವಿಪಕ್ಷಗಳು ಆಕ್ಷೇಪವೆತ್ತಿದೆ. ಆದರೆ ಇದೀಗ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಆದರೆ ನಂತರದ ದಿನಗಳಲ್ಲಿ ಇದರ ಬಗ್ಗೆ ವಿಪಕ್ಷಗಳು ಆಕ್ಷೇಪವೆತ್ತುವ ಸಾಧ್ಯತೆಯಿದೆ. ಇಂದಿನ ಸಭೆಯಲ್ಲಿ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಿದ್ದರು. ಆದರೆ ಸಭೆಯಲ್ಲಿ ಯಾವುದೇ ವಿಚಾರದ ಬಗ್ಗೆ ವಿಸ್ತೃತ ಮಾಹಿತಿ ನೀಡಿಲ್ಲ. ಸಂದರ್ಭಕ್ಕೆ ತಕ್ಕ ಹಾಗೆ ಎಲ್ಲಾ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ಹೇಳಿರುವುದಾಗಿ ಸಭೆಯಲ್ಲಿ ಭಾಗಿಯಾದ ವಿಪಕ್ಷ ನಾಯಕರು ಹೇಳಿದ್ದಾರೆ.