Select Your Language

Notifications

webdunia
webdunia
webdunia
webdunia

ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಏರಿಸುವ ಪ್ರಸ್ತಾವಕ್ಕೆ ಪ್ರಧಾನಿ ಸಮ್ಮತಿ

PM Modi
ನವದೆಹಲಿ , ಬುಧವಾರ, 1 ಜೂನ್ 2016 (12:07 IST)
ದೇಶದ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದೊಂದಿಗೆ ಸರ್ಕಾರಿ ಸೇವೆಯಲ್ಲಿರುವ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ಪ್ರಧಾನಿ ಮೋದಿ ಒಪ್ಪಿಗೆ ಸೂಚಿಸಿದ್ದಾರೆ.  
 
ಈ ಆದೇಶ 31 ಮೇ, 2016ರಿಂದಲೇ ಜಾರಿಗೆ ಬಂದಿದ್ದು ಆರೋಗ್ಯ ಸಚಿವಾಲಯ ಇದನ್ನು ಸ್ಪಷ್ಟಪಡಿಸಿದೆ. 
 
ಈ ನಡೆ ಅನುಭವಿ ವೈದ್ಯರಿಂದ ದೀರ್ಘ ಸೇವೆಯನ್ನು ಸಕ್ರಿಯಗೊಳಿಸಲು, ಜತೆಗೆ ಸಾರ್ವಜನಿಕ ಆರೋಗ್ಯ ಸೌಲಭ್ಯವನ್ನು ಅವಲಂಬಿಸಿರುವ ಬಡವರಿಗೆ ಉತ್ತಮ ಸೇವೆ ನೀಡಲು ಸರ್ಕಾರಕ್ಕೆ ಅನುಕೂಲಕರವಾಗಲಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 
 
ಉತ್ತರ ಪ್ರದೇಶದ ಸಹಾರನ್​ಪುರದಲ್ಲಿ ಇತ್ತೀಚಿಗೆ ನಡೆದಿದ್ದ  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಕೆ ಮಾಡುವುದಾಗಿ ತಿಳಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಪ್ರತಿಭಟನೆ ಹತ್ತಿಕ್ಕಲು ಸರಕಾರದಿಂದ ಎಸ್ಮಾ ಕಾಯ್ದೆ ಜಾರಿ