ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಭೂತಾನ್ ಪ್ರಧಾನಿ ಸೇರಿದಂತೆ ಅನೇಕ ಗಣ್ಯರನ್ನು ಆಹ್ವಾನಿಸಿದ್ದಾರೆ.
ಇತರ ಆಹ್ವಾನಿತರೆಂದರೆ, ಉತ್ತರಪ್ರದೇಶ ಸಿಎಂ ಅಖಿಲೇಶ್ ಯಾದವ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಆರ್‌ಜೆಡಿ ಮುಖ್ಯಸ್ಥ ನಿತೀಶ್ ಕುಮಾರ್ ಯಾದವ್ ಅವರನ್ನು ಆಹ್ವಾನಿಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಭೂತಾನ್ ನಾಯಕ ಟಿಶೇರಿಂಗ್ ಟೊಬ್ಗೈ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಅಲಂಕರಿಸಲು ಸಿದ್ದತೆ ನಡೆಸಿದೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.