Publish Date: Thu, 13 Apr 2017 (09:40 IST)
Updated Date: Thu, 13 Apr 2017 (09:45 IST)
ನವದೆಹಲಿ: ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿರವುದಕ್ಕೆ ಇದೇ ಸಾಕ್ಷಿ. ಸಾಮಾಜಿಕ ಜಾಲತಾಣವನ್ನು ಯಶಸ್ವಿಯಾಗಿ ಬಳಸಿಕೊಳ್ಳುವ ಮೋದಿ, ಇನ್ ಸ್ಟಾಗ್ರಾಂನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನೇ ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದಾರೆ.
ಇನ್ ಸ್ಟಾಗ್ರಾನಲ್ಲಿ 6.8 ಮಿಲಿಯನ್ ಫಾಲೋವರ್ ಗಳನ್ನು ಮೋದಿ ಹೊಂದಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದ್ದಾರೆ. ಅವರು 6.3 ಹಿಂಬಾಲಕರನ್ನು ಹೊಂದಿದ್ದಾರೆ.
ಮೋದಿ ಒಟ್ಟು 53 ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅವರ ಪ್ರತೀ ಫೋಟೋಗೂ ಭಾರೀ ಪ್ರತಿಕ್ರಿಯೆಗಳು ಬರುತ್ತವೆ. ಹಾಗಾಗಿ ಅವರು ವಿಶ್ವದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ