Publish Date: Sun, 05 Apr 2020 (17:10 IST)
Updated Date: Sun, 05 Apr 2020 (17:12 IST)
ಬೆಂಗಳೂರು: ಕೊರೋನಾದಿಂದಾಗಿ ದೇಶವಿಡೀ ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಪ್ರಧಾನಿ ಮೋದಿ ಮಾಜಿ ಪ್ರಧಾನಿಗಳು, ರಾಷ್ಟ್ರಪತಿಗಳಿಗೆ ಕರೆ ಮಾಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದಿಂದ ತಿಳಿದುಬಂದಿದೆ.
ಮಾಜಿ ಪ್ರಧಾನಿ ದೇವೇಗೌಡ, ಮನಮೋಹನ್ ಸಿಂಗ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರತಿಭಾ ಸಿಂಗ್ ಪಾಟೀಲ್ ಮುಂತಾದ ನಾಯಕರಿಗೆ ಪ್ರಧಾನಿ ಖುದ್ದಾಗಿ ಕರೆ ಮಾಡಿ ಮಾತನಾಡಿದ್ದಾರೆ.
ಆದರೆ ಅವರ ನಡುವೆ ಏನು ಮಾತುಕತೆ ನಡೆದಿದೆ ಎಂದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆದರೆ ಲಾಕ್ ಡೌನ್ ಬಗ್ಗೆ ಮತ್ತು ಕೊರೋನಾ ಬಗ್ಗೆ ಚರ್ಚೆ ನಡೆಸಿರಬಹುದು ಎನ್ನಲಾಗಿದೆ.