Publish Date: Tue, 07 Jan 2020 (11:00 IST)
Updated Date: Tue, 07 Jan 2020 (11:01 IST)
ನವದೆಹಲಿ: ಪ್ರಧಾನಿ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉತ್ತಮ ಬಾಂಧವ್ಯ ಕಾಯ್ದುಕೊಂಡು ಬಂದಿದ್ದಾರೆ. ಅದಕ್ಕೆ ಇತ್ತೀಚೆಗೆ ಮೋದಿ ಅಮೆರಿಕಾಗೆ ತೆರಳಿದ್ದಾಗ ಸಿಕ್ಕ ಸ್ವಾಗತವೇ ಸಾಕ್ಷಿ.
ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಪ್ರಧಾನಿ ಮೋದಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕರೆ ಮಾಡಿದ್ದು, ಹೊಸ ವರ್ಷದ ಶುಭಾಷಯ ಕೋರಿದ್ದಾರೆ ಎನ್ನಲಾಗಿದೆ. ತಡವಾಗಿ ಟ್ರಂಪ್ ಗೆ ವಿಶ್ ಮಾಡಿದ ಪ್ರಧಾನಿ ಮೋದಿ ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದೂ ಸಂದೇಶ ನೀಡಿದ್ದಾರೆ ಎಂದು ಸರಕಾರಿ ಮೂಲಗಳು ಹೇಳಿವೆ.