Webdunia - Bharat's app for daily news and videos

Install App

ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರಿಗೆ ಪ್ರಧಾನಿ ಮೋದಿ ಫೋನ್ ಕರೆ

Webdunia
ಬುಧವಾರ, 29 ನವೆಂಬರ್ 2023 (10:40 IST)
ನವದೆಹಲಿ: ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಖುದ್ದಾಗಿ ಫೋನ್ ಕರೆ ಮಾಡಿ ಮಾತನಾಡಿದ್ದಾರೆ.

ನವಂಬರ್ 12 ರಂದು ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿದು 41 ಕಾರ್ಮಿಕರು ಅದರೊಳಗೆ ಸಿಲುಕಿಕೊಂಡಿದ್ದರು. 17 ದಿನಗಳ ಸತತ ಕಾರ್ಯಾಚಾರಣೆಯ ಬಳಿಕ ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ನಿನ್ನೆ ರಕ್ಷಿಸಲಾಯಿತು.

ಕಾರ್ಮಿಕರು ಹೊರಬಂದ ಕೂಡಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಹೂ ಮಾಲೆ ಹಾಕಿ ಬರಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಕೂಡಾ ಸೋಷಿಯಲ್ ಮೀಡಿಯಾ ‘ಎಕ್ಸ್’ ಮೂಲಕ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಲ್ಲದೆ, ಕಾರ್ಮಿಕರಿಗೂ ಹಾರೈಸಿದ್ದರು.

ರಕ್ಷಿಸಲ್ಪಟ್ಟ ಎಲ್ಲಾ 41 ಕಾರ್ಮಿಕರನ್ನು ಒಂದೇ ಕಡೆ ಇರಿಸಲಾಗಿತ್ತು. ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲಾ ಕಾರ್ಮಿಕರಿಗೆ ಉತ್ತರಾಖಂಡ ಸರ್ಕಾರ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments