ನವದೆಹಲಿ: ಕೊರೋನಾ ವಿರುದ್ಧ ಇಡೀ ದೇಶದಲ್ಲೇ ಅರ್ಹರಿಗೆ ವ್ಯಾಕ್ಸಿನ್ ನೀಡುವಿಕೆ ಭರದಿಂದ ಸಾಗುತ್ತಿದ್ದು, ಪ್ರಧಾನಿ ಮೋದಿ ಎರಡನೇ ಹಂತದ ಲಸಿಕೆ ಪಡೆದುಕೊಂಡಿದ್ದಾರೆ.
ಕೆಲವು ದಿನಗಳ ಮೊದಲು ಪ್ರಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೊದಲ ಹಂತದ ಲಸಿಕೆ ಪಡೆದುಕೊಂಡಿದ್ದರು. ಇದೀಗ ಮತ್ತೆ ಏಮ್ಸ್ ನಲ್ಲಿ ಎರಡನೇ ಮತ್ತು ಕೊನೆಯ ಲಸಿಕೆ ಪಡೆದುಕೊಂಡಿದ್ದಾರೆ. ಬಳಿಕ ದೇಶದ ಅರ್ಹ ಜನತೆ ಲಸಿಕೆ ಪಡೆದು ಕೊರೋನಾ ವಿರುದ್ಧ ಹೋರಾಟದಲ್ಲಿ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.
ಸದ್ಯಕ್ಕೆ ದೇಶದಲ್ಲಿ 45 ಮತ್ತು ಮೇಲ್ಪಟ್ಟ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡುವ ಕಾರ್ಯ ಆರಂಭವಾಗಿದೆ. ಇನ್ನೊಂದೆಡೆ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!