ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

Krishnaveni K
ಶುಕ್ರವಾರ, 14 ನವೆಂಬರ್ 2025 (20:23 IST)
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಮುಖ್ಯ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮುಂದಿನ ನಾಲ್ಕು ಟಾರ್ಗೆಟ್ ಯಾವುದೆಂದು ತಿಳಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 202 ಸ್ಥಾನಗಳನ್ನು ಪಡೆದುಕೊಂಡು ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನಲೆಯಲ್ಲಿ ಇಂದು ಮೋದಿ ಬಿಜೆಪಿ ಕಚೇರಿಗೆ ಬಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೆ ಅಧಿಕಾರ ನೀಡಿರುವುದಕ್ಕೆ ಬಿಹಾರದ ಜನತೆಗೆ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಇದು ನಮಗೆ ನೀಡಿದ ಹೊಸ ಜವಾಬ್ಧಾರಿಯಾಗಿದೆ. ಮುಂದಿನ ದಿನಗಳಲ್ಲಿ ಬಿಹಾರದಲ್ಲಿ ಉದ್ಯೋಗ ಹೆಚ್ಚಲಿದೆ. ಬಿಹಾರಿಗಳು ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಗೆ ಹೋಗಬೇಕಾಗಿಲ್ಲ. ಬಿಹಾರದಲ್ಲೇ ಮನೆ ಕಟ್ಟಿಕೊಳ್ಳಬಹುದು ಎಂದು ಮೋದಿ ಭರವಸೆ ನೀಡಿದ್ದಾರೆ.

ಇನ್ನು, ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿರುವ ಮೋದಿ, ನಿಮ್ಮ ಮುಂದೆ ಇನ್ನು ನಾಲ್ಕು ಗುರಿಯಿದೆ ಎಂದಿದ್ದಾರೆ. ತಮಿಳುನಾಡು, ಪಾಂಡಿಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಲದಲ್ಲೂ  ಗೂಂಡಾ ಆಡಳಿತವನ್ನು ಕೊನೆಗಾಣಿಸುವ ಸವಾಲು ನಿಮ್ಮ ಮುಂದಿದೆ ಎಂದಿದ್ದಾರೆ. ಈ ರಾಜ್ಯಗಳ ಚುನಾವಣೆ ಸದ್ಯದಲ್ಲೇ ಇದ್ದು, ಇಲ್ಲಿಯೂ ಇದೇ ಉತ್ಸಾಹದಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments