ಭ್ರಷ್ಟಾಚಾರ ನಿಯಂತ್ರಣ ಮಾಡಲು ಸರ್ಕಾರದಿಂದ ಸಾಧ್ಯವಾಗಿಲ್ಲ. ಇನ್ನಷ್ಟು ಹೆಚ್ಚಾಗಿದ್ದು, ಸಮಾಜವನ್ನು ಹಾಳುಗೆಡುವುತ್ತಿದೆ. ಈ ಸಮಸ್ಯೆಗಳ ಬಗ್ಗೆ ಮೋದಿ ಅವರಿಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಆದರೆ, ಒಂದು ಪತ್ರಕ್ಕೂ ಉತ್ತರಿಸುವ ಸೌಜನ್ಯ ತೋರಿಸಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.
ದೇಶದ ಗಂಭೀರ ಸಮಸ್ಯೆಗಳನ್ನು ಹಾಗೂ ಭ್ರಷ್ಟಾಚಾರ ಹಾವಳಿ ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜಸ್ತಾನದ ನಗೌರಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಮದ್ಯ ಮುಕ್ತ ಗ್ರಾಮದ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಂಕಷ್ಟಕ್ಕಿರುವ ಗಂಭೀರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಇದರಿಂದ ಸರಣ ಆತ್ಮಹತ್ಯೆಗಳು ನಡೆಯುತ್ತಿವೆ ಎಂದು ದೂರಿದ್ದಾರೆ.