Select Your Language

Notifications

webdunia
webdunia
webdunia
webdunia

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನಕ್ಕೆ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಂತಾಪ

ಪ್ರಧಾನಿ ನರೇಂದ್ರ ಮೋದಿ

Sampriya

ನವದೆಹಲಿ , ಮಂಗಳವಾರ, 5 ಆಗಸ್ಟ್ 2025 (17:52 IST)
Photo Credit X
ನವದೆಹಲಿ [ಭಾರತ]: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿ, "ಶ್ರೀ ಸತ್ಯಪಾಲ್ ಮಲಿಕ್ ಜಿ ಅವರ ನಿಧನದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ" ಎಂದು ಹೇಳಿದ್ದಾರೆ.

ತೀವ್ರ ಶೋಕ ವ್ಯಕ್ತಪಡಿಸಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಗವರ್ನರ್ ಮಲಿಕ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ಹಾಗೆಯೇ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು. ಮಾಜಿ ಗವರ್ನರ್ ಮತ್ತು 9 ನೇ ಲೋಕಸಭೆಯ ಸದಸ್ಯರಾದ ಸತ್ಯಪಾಲ್ ಮಲಿಕ್ ಜಿ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಮತ್ತು ದುಃಖದಲ್ಲಿರುವ ಕುಟುಂಬ ಮತ್ತು ಬೆಂಬಲಿಗರಿಗೆ ಶಕ್ತಿಯನ್ನು ನೀಡಲೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಓಂ ಬಿರ್ಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

79 ವರ್ಷದ ನಾಯಕ ಇಂದು ಮಧ್ಯಾಹ್ನ 1.10 ಗಂಟೆಗೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಮಲಿಕ್ ಅವರ ವೈಯಕ್ತಿಕ ಕಾರ್ಯದರ್ಶಿ ಕೆಎಸ್ ರಾಣಾ ತಿಳಿಸಿದ್ದಾರೆ. 

ಸತ್ಯಪಾಲ್ ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಹಿಂದಿನ ಜಮ್ಮು ಮತ್ತು ಕಾಶ್ಮೀರದ ಕೊನೆಯ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಟೋಬರ್ 1 ರಿಂದ ದೆಹಲಿಯಿಂದ ಮನಿಲಾಗೆ ನೇರ ವಿಮಾನಯಾನ ಆರಂಭ