ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ಏನೆಲ್ಲಾ ಕಟ್ಟುನಿಟ್ಟು ಮಾಡ್ತಿದ್ದಾರೆ ಪಿಎಂ

Krishnaveni K
ಶುಕ್ರವಾರ, 31 ಮೇ 2024 (10:08 IST)
Photo Credit: X
ಕನ್ಯಾಕುಮಾರಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲು ಪ್ರಧಾನಿ ಮೋದಿ ಎರಡು ದಿನಗಳ ಕಾಲ ಕನ್ಯಾಕುಮಾರಿಯ ವಿವೇಕಾನಂದ ಬಂಡೆಯಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲಿದ್ದಾರೆ.  ಧ್ಯಾನಕ್ಕಾಗಿ ಅವರು ಮಾಡಿರುವ ಕಟ್ಟುನಿಟ್ಟುಗಳೇನು ನೋಡಿ.

ಪ್ರಧಾನಿ ಮೋದಿ ಪ್ರತೀ ಬಾರಿ ಲೋಕಸಭೆ ಚುನಾವಣೆ ಮುಗಿದ ಬಳಿಕ ಧ್ಯಾನ ಮಾಡುವ ಪದ್ಧತಿ ಪಾಲಿಸಿಕೊಂಡು ಬಂದಿದ್ದಾರೆ. ಈ ಮೊದಲು ಎರಡು ಬಾರಿಯೂ ಅವರು ಬೇರೆ ಬೇರೆ ಸ್ಥಳಗಳಲ್ಲಿ ಧ್ಯಾನ ಮಾಡಿದ್ದರು. ಈ ಬಾರಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ್ದ ಸ್ಥಳದಲ್ಲೇ ಧ್ಯಾನ ಮಾಡಲು ತೀರ್ಮಾನಿಸಿದ್ದಾರೆ.

ಅದರಂತೆ ಒಟ್ಟು 45 ಗಂಟೆಗಳ ನಿರಂತರ ಧ್ಯಾನ ಮಾಡಲಿದ್ದಾರೆ. ಈ ವೇಳೆ ಅವರು ಆಹಾರ ವಿಚಾರದಲ್ಲೂ ಕಟ್ಟುನಿಟ್ಟು ಮಾಡಲಿದ್ದಾರೆ. ಎರಡು ದಿನಗಳ ಕಾಲ ಕೇವಲ ದ್ರವಾಹಾರ ಮಾತ್ರ ಸೇವನೆ ಮಾಡಲಿದ್ದಾರೆ. ಧ್ಯಾನದ ಹೊರತಾಗಿ ಬಾಹ್ಯ ಪ್ರಪಂಚದೊಂದಿಗೆ ಯಾವುದೇ ಸಂಪರ್ಕವಿಟ್ಟುಕೊಳ್ಳುವುದಿಲ್ಲ. ಜೊತೆಗೆ  ಮಾತೂ ಇಲ್ಲದೇ ದೇವರ ಧ್ಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಕಳೆದ ಬಾರಿ 2019 ರ ಚುನಾವಣೆ ಬಳಿಕ ಕೇದಾರನಾಥ ಗುಹೆಯಲ್ಲಿ ಮೋದಿ 15 ಗಂಟೆಗಳ ಕಾಲ ನಿರಂತರ ಧ್ಯಾನ ಮಾಡಿದ್ದರು. ಆದರೆ ಈ ಬಾರಿ ಅತೀ ಹೆಚ್ಚು ಅವಧಿ ಧ್ಯಾನ ಮಾಡಲಿದ್ದಾರೆ.  ಇದಕ್ಕೆ ಮೊದಲು ಅವರು ವಿವೇಕಾನಂದರ ಪ್ರತಿಮೆಗೆ ನಮಸ್ಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments