Publish Date: Sun, 18 Apr 2021 (10:12 IST)
Updated Date: Sun, 18 Apr 2021 (10:13 IST)
ನವದೆಹಲಿ: ದೇಶದಲ್ಲಿ ಕೊರೋನಾ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದ್ದಾರೆ.
ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ, ಕೊರೋನಾ ನಿಯಂತ್ರಣಕ್ಕೆ ವ್ಯಾಕ್ಸಿನ್ ಉತ್ಪಾದನೆ ಹೆಚ್ಚಳ, ಆಸ್ಪತ್ರೆಗಳಲ್ಲಿ ಸೌಲಭ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.
ಕಳೆದ ವರ್ಷದಂತೆ ಮತ್ತೊಮ್ಮೆ ನಾವು ಒಗ್ಗೂಡಿ ಕೊರೋನಾ ವಿರುದ್ಧ ಹೋರಾಡಬೇಕಿದೆ. ರೋಗ ಪತ್ತೆ, ಪರೀಕ್ಷೆ ಮತ್ತು ಚಿಕಿತ್ಸೆ ತ್ವರಿತವಾಗಿ ಸಿಗುವಂತೆ ನೋಡಿಕೊಳ್ಳಬೇಕಿದೆ ಎಂದು ಪ್ರಧಾನಿ ಹೇಳಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿಯಲ್ಲಿ ದಾಖಲೆಯ ಪ್ರಮಾಣದ ಕೊರೋನಾ ಕೇಸ್ ಕಂಡುಬಂದಿದೆ.