Publish Date: Sun, 05 Jul 2020 (16:57 IST)
Updated Date: Sun, 05 Jul 2020 (16:58 IST)
ನವದೆಹಲಿ: ಲಡಾಖ್ ಗಡಿಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷದ ಬಗ್ಗೆ ರಾಷ್ಟ್ರಪತಿಗಳಿಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸದ್ಯದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿ ಚರ್ಚೆ ನಡೆಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ಹೇಳಿವೆ.