ರಾಜ್ಯಗಳ ನಡುವೆ ಎದುರಾಗಿರುವ ಜಲ ವಿವಾದಗಳನ್ನು ಬಗೆಹರಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಹಿಂದೆ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ನದಿ ವಿವಾದವನ್ನು ಬಗೆಹರಿಸಿದ್ದರು. ಅದರಂತೆ ಪ್ರಧಾನಿ ಮೋದಿ ಕೂಡಾ ರಾಜ್ಯಗಳ ನಡುವೆ ಎದುರಾಗಿರುವ ನದಿ ವಿವಾದಗಳನ್ನು ಬಗೆಹರಿಸಬೇಕು ಎಂದು ಕೋರಿದರು.
ರಾಜ್ಯದಲ್ಲಿರುವ ಬಿಜೆಪಿ ನಾಯಕರು ರೈತರ ಸಾಲ ಮನ್ನಾ ಆಗಲಿ, ನದಿ ವಿವಾದಗಳ ಬಗ್ಗೆಯಾಗಲಿ ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸುತ್ತಿಲ್ಲ. ಜನತೆ ಸಂಕಷ್ಟದಲ್ಲಿದ್ದರು ಕೂಡಾ ಬಿಜೆಪಿ ನಾಯಕರು ಮೌನವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.