ಪ್ರಧಾನಿ ಮೋದಿ ಸೆಕೆಂಡ್ ಇನಿಂಗ್ಸ್ ಇಂದಿನಿಂದ ಶುರು: ಭಾಗವಹಿಸುವ ಗಣ್ಯರು ಯಾರೆಲ್ಲಾ?

Webdunia
ಗುರುವಾರ, 30 ಮೇ 2019 (10:07 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಮೋದಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಈ ಸಮಾರಂಭಕ್ಕೆ ದೇಶ, ವಿದೇಶದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅಫ್ಘಾನಿಸ್ತಾನ ಅಧ್ಯಕ್ಷ  ಅಬ್ದುಲ್ ಹಮೀದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಒಲಿ, ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮಿಂಟ್, ಭೂತಾನ್ ಪ್ರಧಾನಿ ಲೋಟೆ ಶೆರಿಂಗ್, ಥಾಯ್ಲೆಂಡ್ ವಿಶೇಷ ರಾಯಭಾರಿ ಗ್ರಿಸಾಡಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್, ಕಿರ್ಗಿಸ್ತಾನ ಅಧ್ಯಕ್ಷ ಸೂರನ್ ಬೇ ಜೀನ್ ಬೆಕಾವೊ ಮತ್ತಿತರು ಪಾಲ್ಗೊಳ್ಳಲಿದ್ದಾರೆ.

ಅಲ್ಲದೆ, ಕರ್ನಾಟಕ ಸಿಎಂ ಕುಮಾರಸ್ವಾಮಿ, ಆಂಧ್ರ ನಿಯೋಜಿತ ಸಿಎಂ ಜಗಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ತಮಿಳು ಸೂಪರ್ ಸ್ಟಾರ್ ಕಮ್ ರಾಜಕಾರಣಿಗಳಾದ ರಜನೀಕಾಂತ್, ಕಮಲ್ ಹಾಸನ್ ಮುಂತಾದ ಗಣ್ಯರೂ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಮುಂದಿನ ಸುದ್ದಿ
Show comments