Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಪ್ರಧಾನಿ ಮೋದಿ

Modi

Krishnaveni K

ನವದೆಹಲಿ , ಮಂಗಳವಾರ, 7 ಮೇ 2024 (11:35 IST)
ನವದೆಹಲಿ: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.

ಮೈತ್ರಿ ಪಕ್ಷ ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಾಗಿದೆ. ಹೀಗಾಗಿ ಪ್ರಧಾನಿ ಮೋದಿ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಲೇ ಇದ್ದರು.

ಇದೀಗ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಈ ವಿವಾದದ ಬಗ್ಗೆ ನೇರವಾಗಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ಬಗ್ಗೆ ನಾವು ಶೂನ್ಯ ಸಹನೆ ಹೊಂದಿದ್ದೇವೆ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣನನ್ನು ದೇಶದಿಂದ ಹೊರಹೋಗಲು ಅನುಕೂಲ ಮಾಡಿಕೊಟ್ಟಿದೆ’ ಎಂದು ಆರೋಪಿಸಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮೋದಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಬಳಿ ವಿಡಿಯೋಗಳಿವೆ ಎಂದರೆ ಅದು ಅವರ ಜೊತೆಗೆ ಮೈತ್ರಿ ಮಾಡಿದ್ದಾಗಿನದ್ದಾಗಿದೆ. ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಒಂದೊಂದೇ ಹೊರಬಿಡುತ್ತಿದ್ದಾರೆ. ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ವಿಡಿಯೋ ಹರಿಯಬಿಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತದಾನ ಮಾಡಿದ ಬಳಿಕ ಮಗ ರಾಘವೇಂದ್ರ ಗೆಲ್ಲುತ್ತಾರೆ ಎಂದ ಯಡಿಯೂರಪ್ಪ