ಚೆನ್ನೈ: ನಿನ್ನೆ ಅಸ್ತಂಗತರಾದ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಅಂತಿಮ ದರ್ಶನವನ್ನು ಪ್ರಧಾನಿ ಮೋದಿ ಪಡೆದಿದ್ದಾರೆ.
ಚೆನ್ನೈನ ರಾಜಾಜಿ ಹಾಲ್ ನಲ್ಲಿ ಕರುಣಾನಿಧಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದೀಗ ತಾನೇ ರಾಜಾಜಿ ಹಾಲ್ ಗೆ ಆಗಮಿಸಿದ ಪ್ರಧಾನಿ ಮೋದಿ ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಕೆಲ ಹೊತ್ತಿನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡಾ ಸ್ಥಳಕ್ಕೆ ಆಗಮಿಸಿ ಕರುಣಾನಿಧಿಯವರ ಅಂತಿಮ ದರ್ಶನ ಪಡೆಯಲಿದ್ದಾರೆ. ಇದಲ್ಲದೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಕೇಜ್ರಿವಾಲ್, ಸಿಎಂ ಕುಮಾರಸ್ವಾಮಿ ಸೇರಿದಂತೆ ಇನ್ನೂ ಅನೇಕ ನಾಯಕರು ಕರುಣಾನಿಧಿ ಅಂತಿಮ ದರ್ಶನ ಪಡೆಯಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.