Publish Date: Sun, 12 Nov 2017 (08:19 IST)
Updated Date: Sun, 12 Nov 2017 (08:21 IST)
ನವದೆಹಲಿ: ಪ್ರಧಾನಿ ಮೋದಿ ತಮ್ಮ ಮಂತ್ರಿ ಮಂಡಲದ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ. ಅದರಂತೆ ಸರ್ಕಾರದ ಒಳ್ಳೆಯ ಕೆಲಸಗಳ ಬಗ್ಗೆ ಮಾತನಾಡುತ್ತಾ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಚಿವರುಗಳ ಜತೆ ಸಭೆ ನಡೆಸಿರುವ ಪ್ರಧಾನಿ ಮೋದಿ, ಜನರ ಜೀವನದಲ್ಲಿ ಬದಲಾವಣೆ ತಂದ ಯೋಜನೆಗಳ ಬಗ್ಗೆ ಹೆಚ್ಚು ಹೆಚ್ಚು ಸಾರ್ವಜನಿಕವಾಗಿ ಮಾತನಾಡಿ, ಆ ಮೂಲಕ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನೋಟು ನಿಷೇಧ ಮತ್ತು ಜಿಎಸ್ ಟಿ ಬಗ್ಗೆ ಸದಾ ಕುಟುಕುತ್ತಿರುವ ಹಿನ್ನಲೆಯಲ್ಲಿ ಜನರಲ್ಲಿ ಸರ್ಕಾರದ ಬಗ್ಗೆ ಸದಭಿಪ್ರಾಯ ಮೂಡಿಸಲು ಅಗತ್ಯ ಹೆಜ್ಜೆಯಿಡಲು ಪ್ರಧಾನಿ ಮೋದಿ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ