ನವದೆಹಲಿ: ದೆಹಲಿ ಸ್ಪೋಟದ ಸಂಚುಕೋರರನ್ನು ಸುಮ್ಮನೇ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಭೂತಾನ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ದೆಹಲಿ ಸ್ಪೋಟದ ಬಗ್ಗೆ ಮಾತನಾಡಿದ್ದಾರೆ.
ಭೂತಾನ್ ನಲ್ಲಿ ಜಲ ವಿದ್ಯುತ್ ಯೋಜನೆಗೆ ಚಾಲನೆ ನೀಡಲು ತೆರಳಿರುವ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ದೆಹಲಿ ಸ್ಪೋಟದ ದಾಳಿಕೋರರನ್ನು ಸುಮ್ಮನೇ ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ನಾನು ಇಲ್ಲಿಗೆ ತುಂಬಾ ಭಾರವಾದ ಹೃದಯದಿಂದ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ತನ್ನವರನ್ನು ಕಳೆದುಕೊಂಡ ಕುಟುಂಬದವರ ನೋವು ನನಗೆ ಅರ್ಥವಾಗುತ್ತದೆ. ಅವರೊಂದಿಗೆ ಇಡೀ ರಾಷ್ಟ್ರವೇ ನಿಂತಿದೆ ಎಂದಿದ್ದಾರೆ.
ನಮ್ಮ ತನಿಖಾ ಸಂಸ್ಥೆಗಳು ಈ ಪಿತೂರಿಯ ಹಿಂದಿನ ಶಕ್ತಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅವರನ್ನು ಪತ್ತೆ ಹೆಚ್ಚಿ ತಕ್ಕ ಶಿಕ್ಷೆ ನೀಡುವುದಾಗಿ ಪ್ರಧಾನಿ ಮೋದಿ ಗುಡುಗಿದ್ದಾರೆ.