Publish Date: Mon, 22 Jan 2024 (11:54 IST)
Updated Date: Mon, 22 Jan 2024 (12:00 IST)
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಈಗ ರಾಮನ ಜನ್ಮಭೂಮಿಗೆ ಬಂದಿಳಿದಿದ್ದಾರೆ.
ಇಂದು ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಭಾಗಿಯಾಗಲು ಹಲವಾರು ಗಣ್ಯರು ಈಗಾಗಲೇ ರಾಮನ ನಗರಿಗೆ ಬಂದಿಳಿದಿದ್ದಾರೆ.
ಇಂದು ಪ್ರಧಾನಿ ಮೋದಿ ಯಜಮಾನನ ಸ್ಥಾನದಲ್ಲಿ ನಿಂತು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಇದಕ್ಕಾಗಿ ಪ್ರಧಾನಿ ಅಯೋಧ್ಯೆಗೆ ಬಂದಿಳಿದಿದ್ದಾರೆ. ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಧಾನಿ ಬಳಿಕ ಹೆಲಿಕಾಪ್ಟರ್ ಮೂಲಕ ಅಯೋಧ್ಯೆ ತಲುಪಿದ್ದಾರೆ.
ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡ ಬಳಿಕ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇದಕ್ಕಾಗಿ ವಿಶೇಷ ವೇದಿಕೆಯನ್ನು ಸಿದ್ಧತೆ ನಡೆಸಲಾಗಿದೆ.
Krishnaveni K
Publish Date: Mon, 22 Jan 2024 (11:54 IST)
Updated Date: Mon, 22 Jan 2024 (12:00 IST)