ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

Krishnaveni K
ಬುಧವಾರ, 25 ಜೂನ್ 2025 (12:25 IST)
ನವದೆಹಲಿ: 1975 ರ ತುರ್ತು ಪರಿಸ್ಥಿತಿ ಘಟಿಸಿ ಇಂದಿಗೆ ಐದು ದಶಕಗಳಾಗಿವೆ. ಈ ನಿಟ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ತುರ್ತು ಪರಿಸ್ಥಿತಿಯನ್ನು ಯಾವ ಭಾರತೀಯನೂ ಮರೆಯಲಾಗದು ಎಂದು ವಾಗ್ದಾಳಿ ನಡೆಸಿದ್ದಾರೆ.ತುರ್ತು ಪರಿಸ್ಥಿತಿಯಲ್ಲಿ ತಮ್ಮ ಅನುಭವವನ್ನು ಮೋದಿ ಒಂದು ಪುಸ್ತಕದ ರೂಪದಲ್ಲಿ ಹೊರತಂದಿದ್ದಾರೆ. 

ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಿಕ ಅಧಿಕಾರಿಗಳಿಗೆ ಕತ್ತರಿ ಹಾಕಿ 50 ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ಅಂದಿನ ಕರಾಳ ದಿನದ ಅನುಭವವನ್ನು ಪುಸ್ತಕದ ರೂಪದಲ್ಲಿ ಹೊರತಂದಿದ್ದಾರೆ. ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್​ ದಟ್​ ಫೋರ್ಜ್ಡ್​ ಎ ಲೀಡರ್’ ಎಂಬ ಪುಸ್ತಕವನ್ನು ಮೋದಿ ಬರೆದಿದ್ದು, ಇದನ್ನು ಬ್ಲೂ ಕ್ರಾಫ್ಟ್ ಫೌಂಡೇಷನ್ ಹೊರತರುತ್ತಿದೆ. ವಿಶೇಷವೆಂದರೆ ಕನ್ನಡಿಗರೇ ಆಗಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಇದಕ್ಕೆ ಮುನ್ನುಡಿ ಬರೆದಿದ್ದಾರೆ. ಗೃಹಸಚಿವ ಅಮಿತ್ ಶಾ ಇದನ್ನು ಇಂದು ಲೋಕಾರ್ಪಣೆಗೊಳಿಸುತ್ತಿದ್ದಾರೆ.

ಈ ಪುಸ್ತಕದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹತ್ತಾರು ವೇಷ ತೊಟ್ಟು ಓಡಾಡಿದ್ದನ್ನು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. ಆಗ ಅವರು ಆರ್ ಎಸ್ಎಸ್ ಕಾರ್ಯಕರ್ತರಾಗಿದ್ದರು. ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿ ತಮ್ಮ ವಿರುದ್ಧ ಧ್ವನಿಯೆತ್ತಿದವರ ಹತ್ತಿಕ್ಕುವ ನಿರಂಕುಶ ಪ್ರಭುತ್ವ ಹೇರಿದ್ದರು. ಇದರ ವಿರುದ್ಧ ಹೋರಾಟದಲ್ಲಿ ಮೋದಿ ಕೂಡಾ ಪಾಲ್ಗೊಂಡಿದ್ದರು. ಈ ಚಳುವಳಿಯು ಒಬ್ಬ ನಾಯಕನಾಗಿ ತಮ್ಮನ್ನು ಹೇಗೆ ರೂಪಿಸಿತು ಎಂದು ಮೋದಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments