Webdunia - Bharat's app for daily news and videos

Install App

ಹೈದರಾಬಾದ್​ಗೆ ಪ್ರಧಾನಿ ಮೋದಿ ಭೇಟಿ

Webdunia
ಶುಕ್ರವಾರ, 4 ಫೆಬ್ರವರಿ 2022 (06:25 IST)
ನವದೆಹಲಿ : ICRISATನ 50ನೇ ವಾರ್ಷಿಕೋತ್ಸವದ ಪ್ರಯುಕ್ತ ಮತ್ತು 11ನೇ ಶತಮಾನದ ಭಕ್ತಿ ಸಂತ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 5ರಂದು ಹೈದರಾಬಾದ್‌ಗೆ ಭೇಟಿ ನೀಡಲಿದ್ದಾರೆ.

ತೆಲಂಗಾಣ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಇಂದು ಪ್ರಧಾನಿ ಮೋದಿ ಭೇಟಿಯ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಈ ಸ್ಥಳಗಳಲ್ಲಿ ಬ್ಲೂ ಬುಕ್ ಪ್ರಕಾರ ಸಂಚಾರ ವ್ಯವಸ್ಥೆ ಮತ್ತು ಬಂದೋಬಸ್ತ್ ಜೊತೆಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.

ಪ್ರಧಾನ ಕಾರ್ಯದರ್ಶಿ ಸೋಮೇಶ್ ಕುಮಾರ್ ಇಂದು ಬಿಆರ್‌ಕೆಆರ್ ಭವನದಲ್ಲಿ ಪ್ರಧಾನ ಮಂತ್ರಿ ಮುಚಿಂತಲ್ ಮತ್ತು ಇಕ್ರಿಸ್ಯಾಟ್‌ಗೆ ಭೇಟಿ ನೀಡುವ ಸಲುವಾಗಿ ಮಾಡಬೇಕಾದ ವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿದ್ದಾರೆ.

ಫೆ. 5ರಂದು ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆಯು ‘ಪಂಚಲೋಹ’ದಿಂದ ಮಾಡಲ್ಪಟ್ಟಿದೆ. ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಜಿಂಕ್ ಸಮ್ಮಿಶ್ರಣದಿಂದ ನಿರ್ಮಿಸಲಾಗಿರುವ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಲೋಹದ ಪ್ರತಿಮೆಗಳಲ್ಲಿ ಒಂದಾಗಿದೆ.

ಶನಿವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಮಾನುಜಾಚಾರ್ಯರ ಜೀವನ ಪಯಣ ಮತ್ತು ಬೋಧನೆ ಕುರಿತು 3ಡಿ ಪ್ರೆಸೆಂಟೇಶನ್ ಮ್ಯಾಪಿಂಗ್ ಪ್ರದರ್ಶಿಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments