ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಲಾಕ್ ಡೌನ್ ಬಗ್ಗೆ ಇದ್ದ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ಲಾಕ್ ಡೌನ್ ಅನ್ನು ಕೊನೆಯ ಅಸ್ತ್ರವಾಗಿ ಬಳಸಿ ಎಂದು ರಾಜ್ಯಗಳಿಗೆ ಸಲಹೆ ನೀಡಿ್ದಾರೆ. ಲಾಕ್ ಡೌನ್ ಬದಲಿಗೆ ಕಠಿಣ ನಿಯಮ, ಕರ್ಫ್ಯೂ ಜಾರಿಗೊಳಿಸಬಹುದು ಎಂದಿದ್ದಾರೆ.
ದೇಶದ ಜನರ ಆರೋಗ್ಯದ ಜೊತೆಗೆ ಆರ್ಥಿಕತೆಯೂ ಮುಖ್ಯ. ಹೀಗಾಗಿ ದೇಶವ್ಯಾಪೀ ಲಾಕ್ ಡೌನ್ ಅಸ್ತ್ರ ಬಳಸುವ ಯೋಚನೆ ನಮ್ಮ ಮುಂದಿಲ್ಲ. ಇದು ಕೊನೆಯ ಆಯ್ಕೆಯಾಗಬೇಕು. ಬದಲಿಗೆ ಮೈಕ್ರೋ ಕಂಟೈನ್ಮೆಂಟ್ ವಲಯಗಳಿಗೆ ಆದ್ಯತೆ ನೀಡಿ ಎಂದು ಪ್ರಧಾನಿ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.