Publish Date: Mon, 18 Dec 2017 (10:58 IST)
Updated Date: Mon, 18 Dec 2017 (11:02 IST)
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದ ಎದುರು ವಿಜಯದ ಸಂಕೇತ ತೋರಿಸಿದ್ದಾರೆ.
ಗುಜರಾತ್ ನಲ್ಲಿ ಸರಳ ಬಹುಮತದತ್ತ ಮತ್ತು ಹಿಮಾಚಲ ಪ್ರದೇಶದಲ್ಲಿ ಸ್ಪಷ್ಟ ಬಹುಮತದತ್ತ ಸಾಗಿದೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ರಾಜ್ ಕೋಟ್ ನಲ್ಲಿ ಗೆಲುವು ದಾಖಲಾಗಿದೆ.
ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಂಸತ್ ಭವನದ ಎದುರು ಮಾಧ್ಯಮಗಳತ್ತ ವಿಜಯದ ಸಂಕೇತ ತೋರಿ ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ