Daily Horoscope

ನಿಮ್ಮ ಕರ್ಮಕಾಂಡ ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಮೋದಿ

Webdunia
ಗುರುವಾರ, 12 ಏಪ್ರಿಲ್ 2018 (09:23 IST)
ನವದೆಹಲಿ: ಪ್ರಧಾನಿ ಮೋದಿ  ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಉಪವಾಸ ಸತ್ಯಾಗ್ರಹ ವಿಚಾರದಲ್ಲಿ ಟಾಂಗ್ ಕೊಟ್ಟ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಇಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಸಂಸದರು ಒಂದು ದಿನ ಸಂಸತ್ತಿನ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದರು. ಸಂಸತ್ ಅಧಿವೇಶನ ಸರಿಯಾಗಿ ನಡೆಯಲು ಬಿಡಲಿಲ್ಲ ಎಂಬ ಕಾರಣಕ್ಕೆ ಉಪವಾಸ ಸತ್ಯಾಗ್ರಹ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಬಿಜೆಪಿಯ ಈ ತೀರ್ಮಾನವನ್ನು ಟೀಕಿಸಿರುವ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲ ಇದೊಂದು ನಾಟಕ ಎಂದಿದ್ದಾರೆ.  ‘ಸಿಬಿಎಸ್ ಇ ಮತ್ತು ಎಸ್ಎಸ್ ಸಿ ಹಗರಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದ್ದಕ್ಕೆ ಕೇಂದ್ರ ಸರ್ಕಾರ ಪ್ರಾಯಶ್ಚಿತ ರೂಪದಲ್ಲಿ ಸತ್ಯಾಗ್ರಹ ಮಾಡಲಿ’ ಎಂದು ಟೀಕಿಸಿದ್ದರು.

ಕಾಂಗ್ರೆಸ್ ಪ್ರತಿಕ್ರಿಯೆಗೆ ತಕ್ಕ ತಿರುಗೇಟು ಕೊಟ್ಟಿರುವ ಪ್ರಧಾನಿ ಮೋದಿ ‘ಮೊದಲು ನಿಮ್ಮ ಅಕ್ರಮಗಳನ್ನು ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ. 2014 ರಲ್ಲಿ ಸೋತ ಒಂದು ರಾಜಕೀಯ ಪಕ್ಷ ದೇಶವನ್ನು ಮುಂದುವರಿಯಲು ಬಿಡುತ್ತಿಲ್ಲ. ಒಂದು ದಿನವೂ ಸಂಸತ್ ಕಲಾಪ ನಡೆಯಲು ಬಿಡದೇ ಇವರು ದೇಶದ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದರು. ಇಂತಹವರ ವಿರುದ್ಧ ನಾನು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಮತ್ತು ನನ್ನ ಕರ್ತವ್ಯವನ್ನೂ ನಿಭಾಯಿಸುತ್ತೇನೆ’ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಮುಂದಿನ ಸುದ್ದಿ
Show comments