Select Your Language

Notifications

webdunia
webdunia
webdunia
webdunia

ವಯನಾಡ್ ಭೂಕುಸಿತ ಪ್ರದೇಶಗಳಿಗೆ ನಾಳೆ ಪ್ರಧಾನಿ ಮೋದಿ ಭೇಟಿ

ವಯನಾಡ್ ಭೂಕುಸಿತ ಪ್ರದೇಶಗಳಿಗೆ ನಾಳೆ ಪ್ರಧಾನಿ ಮೋದಿ ಭೇಟಿ

Sampriya

ನವದೆಹಲಿ , ಶುಕ್ರವಾರ, 9 ಆಗಸ್ಟ್ 2024 (20:29 IST)
Photo Courtesy X
ನವದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭೂಕುಸಿತವಾದ ಕೇರಳದ ವಯನಾಡ್ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಹಲವಾರು ಸಂಸದರು ವಯನಾಡು ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಮನವಿ ಮಾಡಿದ ಬೆನ್ನಲ್ಲೇ ಮೋದಿ ಅವರು ವಯನಾಡುಗೆ ಭೇಟಿಗೆ ಮುಂದಾಗಿದ್ದಾರೆ.

ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಕಣ್ಣೂರು ತಲುಪಲಿದ್ದಾರೆ. ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ

ನಿರಾಶ್ರಿತರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೋದಿ ಅವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು, ಆಗಸ್ಟ್ 7 ರಂದು - ದುರಂತದ ಒಂಬತ್ತನೇ ದಿನ - ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ವಯನಾಡ್ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಗಸ್ಟ್ 6 ರಂದು ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ವಿಶ್ವ ದರ್ಜೆಯ ಪುನರ್ವಸತಿ ಸೌಲಭ್ಯಗಳನ್ನು ನೀಡುವುದನ್ನು ರಾಜ್ಯ ಖಚಿತಪಡಿಸುತ್ತದೆ ಎಂದು ಹೇಳಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಶಾಕಿಂಗ್ ನ್ಯೂಸ್, ಪ್ರೀತಿಯಿಂದ ಸಾಕಿದ ಬೆಕ್ಕಿನಿಂದಲೇ ಮನೆಯೊಡತಿ ಸಾವು